"ಬ್ಯೂಟಿಫುಲ್ ಟೀಚರ್"

 

Image Credit: Google

ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ

ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ

ನಮ್ಮ ದೇಶದ ಮೊದಲ ಉಪರಾಷ್ಟ್ರಪತಿ, ಎರಡನೇ ರಾಷ್ಟ್ರಪತಿ ಹಾಗೂ ತತ್ವಶಸ್ತ್ರಜ್ಞರು ಆಗಿದ್ದ ಸರ್ವಪಲ್ಲಿ ರಾಧಾೃಷ್ಣನ್ ಅವರ ಜನ್ಮದಿನವನ್ನು (ಸೆಪ್ಟೆಂಬರ್ 05) " ಶಿಕ್ಷಕರ ದಿನ"ವನ್ನಾಗಿ ಭಾರತದಲ್ಲಿ ಆಚರಿಸಲಾಗುತ್ತಿದೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗೌರವಿಸಲು ರಾಜ್ಯ ಮತ್ತು ರಾಷ್ಟ್ರಮಟ್ಟದ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ, ಆದರೆ ಶಿಕ್ಷಕರ ಪರಿಶ್ರಮಕ್ಕೆ ಯಾವ ಪುರಸ್ಕಾರ ವೂ ಸರಿಸಾಟಿಯಾಗ ಲಾರದು. ಅವರದು ಸರಿಸಾಟಿ ಇಲ್ಲದ ಪರಿಶ್ರಮ ವೆಂದರೆ ತಪ್ಪಾಗಲಾರದು.

ವಿಶ್ವದ ಎಲ್ಲ ದೇಶಗಳಲ್ಲಿ ಶಿಕ್ಷಕರ ದಿನಾಚರಣೆ ಯನ್ನೂ ಬೇರೆ ಬೇರೆ ದಿನದಂದು ಆಚರಿಸಲಾಗುತ್ತಿದೆ. ವಿಶ್ವ ಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಅಕ್ಟೋಬರ್ 05 ರಂದು ವಿಶ್ವ ಶಿಕ್ಷಕರ ದಿನವನ್ನಾಗಿ ಆಚರಿಸಬೇಕೆಂದು ಯುನೆಸ್ಕೋ ಕರೆ ನೀಡಿದೆ.

ಇಂದಿನ ದಿನಗಳಲ್ಲಿ  ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು  ಭೋದಿಸುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಶಿಕ್ಷಣದ ಜೊತೆ ಸಮಾಜದಲ್ಲಿ ಹೊಂದಿಕೊಂಡು ಹೋಗುವಂತೆ ಮಾಡುವ ಜವಾಬ್ದಾರಿ ಕೂಡ ಶಿಕ್ಷಕರ ಮೇಲಿದೆ.  ಇಂದು ಶೈಕ್ಷಣಿಕ ಕ್ಷೇತ್ರ ದ ಅಳಿವು ಉಳಿವು ನಮ್ಮ ಶಿಕ್ಷಕರ ಸೇವಾ ಮನೋಭಾವದ ಮೇಲೆ ನಿಂತಿದೆ. ಭವ್ಯ ಭಾರತವನ್ನು ಕಟ್ಟುವ ಕನಸನ್ನು ನನಸಾಗಿಸಲು ಯುವಪೀಳಿಗೆಯ ನ್ನು  ಸಿದ್ದ ಮಾಡುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು.

ಆದರೆ ಇಂದು ಕೋರನ ವೈರಸ್  ಮಾಡಿರುವ ಸಾಕಷ್ಟು ಹಾನಿಗಳನ್ನು ನೋಡಿದ್ದೇವೆ, ಕೇಳಿದ್ದೇವೆ, ಅದೇ ರೀತಿ ಈ ವೈರಸ್ ಶಿಕ್ಷಕರ ಕೆಲಸವನ್ನು ಕಿತ್ತುಕೊಂಡು ಇಂದು ಸಾವಿರಾರು ಶಿಕ್ಷಕರು  ತಮ್ಮ ವೃತ್ತಿಯನ್ನೇ ಬದಲಾಯಿಸಿಕೊಂಡಿದ್ದಾರೆ.  ಪ್ರತಿ   ವರ್ಷದಂತೆ ಈ ವರ್ಷ  ಶಿಕ್ಷಕರ ದಿನಾಚರಣೆ ಆಚರಿಸಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳೇ ಇಲ್ಲ.

ಈ ಕೆಳಗಿನ ಕಥೆ ತುಂಬಾ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿತ್ತು . ಆದರೆ ಇದನ್ನು ಅ ಸಮಯದಲ್ಲಿ ನಾನು ಬೇರೆಯವರೊಂದಿಗೆ ಹಂಚಿಕೊಳ್ಳುವ ಬದಲು ಇಂದಿನ ವಿಶೇಷವಾದ ದಿನ ಇದನ್ನು ಹಂಚಿಕೊಳ್ಳ ಬಯಸುತ್ತೇನೆ..

ಒಂದು ಕ್ಲಾಸ್ ರೂಮ್ ನಲ್ಲಿ ಸುಮಾರು ವಿದ್ಯಾರ್ಥಿಗಳಿದ್ದರು. ಅವರಲ್ಲಿ ಒಬ್ಬ ಎದ್ದು ನಿಂತು ಪ್ರೊಫೆಸರ್ ಗೆ ಹೇಳಿದ ಸರ್ ನನ್ನ ತಂದೆ ನನ್ನ ಜನ್ಮ ದಿನಕ್ಕೆ ಒಂದು ದುಬಾರಿ ಗಡಿಯಾರವನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಈ  5 ನಿಮಿಷದ ಬ್ರೇಕ್ ನಲ್ಲಿ ಅದನ್ನು ಇಲ್ಲಿಯೇ ಬಿಟ್ಟು ಹೊರಗೆ ಹೋಗಿದ್ದೆ, ಬಂದು ನೋಡಿದರೆ ಕಾಣುತ್ತಿಲ್ಲ. ಆಗ ಪ್ರೊಫೆಸರ್ ವಿಚಾರ ಮಾಡಲಾಗಿ ಈ ಹುಡುಗ ಹೊರಗೆ ಹೋಗಿ ಒಳಗೆ ಬರುವವರೆಗೆ ಕ್ಲಾಸ್ ರೂಮ್ ಒಳಗಿರುವ ಯಾವನೋ ಒಬ್ಬ ಕದ್ದಿರುತ್ತಾನೆ ಎಂದು ಊಹಿಸಿದರು.

ಎಲ್ಲಾ ವಿದ್ಯಾರ್ಥಿಗಳಿಗೆ ಎದ್ದು ನಿಲ್ಲಿಸಿ ತಮ್ಮ ತಮ್ಮ ಕರ್ಚೀಫಿನಿಂದ ತಮ್ಮ ಕಣ್ಣುಗಳನ್ನು ಕಟ್ಟಿಕೊಳ್ಳಲು ತಿಳಿಸಿದರು. ಒಬ್ಬೊಬ್ಬರನ್ನು  ಮೈಮುಟ್ಟಿ ಹುಡುಕುತ್ತಾ ಬಂದಾಗ ಒಬ್ಬನ ಜೇಬಿನಲ್ಲಿ ಅದು ಸಿಕ್ಕಿತು. ಅದನ್ನು ಕಳೆದುಕೊಂಡ ವಿದ್ಯಾರ್ಥಿಗೆ ಒಪ್ಪಿಸಿ, ಎಲ್ಲರಿಗೂ ಕಣ್ಣಿನ ಬಟ್ಟೆ  ತೆಗೆಯಲು ತಿಳಿಸಿದರು. ಎಂದಿನಂತೆ ಪಾಠ ಮುಂದುವರೆಯಿತು.

ಆದರೆ ಗಡಿಯಾರ ಕದ್ದ ವಿದ್ಯಾರ್ಥಿಯ ಮನದಲ್ಲಿ ಭಯ, ಆತಂಕ ಶುರುವಾಗಿತ್ತು. ಇಂದೋ ನಾಳೆಯೋ ನಾನು ಕಳ್ಳ ಎಂದು ಎಲ್ಲರ ಮುಂದೆ ಬಹಿರಂಗವಾಗಿ ವಿಷಯ ತಿಳಿಸುತ್ತಾರೆ. ಆಗ ನನ್ನ ಗತಿ ಏನಾಗಬೇಕು ಎಂದು ಆತಂಕದಿಂದಲೇ ಕ್ಲಾಸಿಗೆ ಬರುತ್ತಿದ್ದ. ಹೀಗೆ ದಿನಗಳು ಕಳೆದು, ತಿಂಗಳುಗಳು ಕಳೆದು, ವರ್ಷವೇ ಕಳೆದು ಹೋಯಿತು. ಆ ವಿಷಯ ಯಾರಿಗೂ ಗೊತ್ತಾಗಲಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಕಾಲೇಜಿನಿಂದ ನಿರ್ಗಮಿಸಿ ಹೋದರು.

ಹಲವು ವರ್ಷಗಳ ನಂತರ ಗಡಿಯಾರ ಕದ್ದ ವಿದ್ಯಾರ್ಥಿ ದೊಡ್ಡ ಬಿಸಿನೆಸ್ ಮ್ಯಾನ್ ಆಗಿ ಒಳ್ಳೆಯ ಹೆಸರು ಮಾಡಿದ್ದ. ಮುಂದೆ ಒಂದು ದಿನ ಆ ಕಾಲೇಜಿನ ವಿದ್ಯಾರ್ಥಿಗಳ ರಿಯೂನಿಯನ್ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಅದೇ ಹುಡುಗ ಕಾಲೇಜಿಗೆ ಬಂದ. ಆತ ನೇರವಾಗಿ ಅದೇ ಪ್ರೊಫೆಸರ್ ಹತ್ತಿರ ಬಂದು ಕಾಲಿಗೆ ನಮಸ್ಕರಿಸಿ ಚಿಕ್ಕ ದನಿಯಲ್ಲಿ ಹೇಳಿದ ಸರ್ ಇಂದು ನಾನು ಜೀವಂತವಾಗಿರಲು ನೀವೇ ಕಾರಣ. ನನ್ನ ಇವತ್ತಿನ ಈ ಸಾಧನೆಗೆ ನೀವು ಮಾತ್ರ ಕಾರಣ. ಆಗ ಆ ಪ್ರೊಫೆಸರ್ ಆಶ್ಚರ್ಯಚಕಿತರಾಗಿ ನಾನು ಹೇಗೆ ಕಾರಣ ಮಗು ಎಂದರು.

ಸರ್ ಅಂದು ನಾನು ಆ ಗಡಿಯಾರವನ್ನು ಕದ್ದ ವಿಷಯ ನೀವು ಯಾರಿಗೂ ಹೇಳಲಿಲ್ಲ ಬಹಿರಂಗಪಡಿಸಲಿಲ್ಲ. ನನ್ನ ಹೆಸರು ಬಹಿರಂಗವಾದ ದಿನ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದ್ದೆ. ಅದೆಷ್ಟು ದಿನ ಕಳೆದರೂ ನೀವು ಈ ವಿಷಯವನ್ನು ಬಹಿರಂಗಪಡಿಸಲಿಲ್ಲ. ಆದ್ದರಿಂದ ನಾನು ಅಂದೇ ನಿರ್ಧರಿಸಿದೆ. ಇನ್ನು ಜೀವನದಲ್ಲಿ ನಿಯತ್ತಾಗಿ ಬದುಕಬೇಕೆಂದು. ಈ ನನ್ನ ಬದಲಾವಣೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು ನೀವೇ. ಆದ್ದರಿಂದ ನೀವೇ ನನ್ನ ದೇವರು ಎಂದ.

ಪ್ರೊಫೆಸರ್ ಆಶ್ಚರ್ಯಚಕಿತರಾಗಿ ಹೌದೇ! ಆ ವಿದ್ಯಾರ್ಥಿ ನೀನೆಯೋ?  ನನಗೂ ಗೊತ್ತಿರಲಿಲ್ಲ ಎಂದರು. ಆ ದಿನ ನಾನು ಎಲ್ಲಾ ವಿದ್ಯಾರ್ಥಿಗಳ ಕಣ್ಣನ್ನು ಕಟ್ಟಿಸಿ, ನಾನು ಕೂಡ ನನ್ನ ಕಣ್ಣುಗಳನ್ನು ಕಟ್ಟಿಕೊಂಡಿದ್ದೆ. ಏಕೆಂದರೆ ಕದ್ದಿರುವ ವಿದ್ಯಾರ್ಥಿ ಯಾರೇ ಆಗಿರಲಿ, ಅವನು ನನ್ನ ವಿದ್ಯಾರ್ಥಿಯೇ. ನನ್ನ ದೃಷ್ಟಿಕೋನದಲ್ಲಿ ನನ್ನ ಯಾವ ವಿದ್ಯಾರ್ಥಿಯೂ ಕೆಳಮಟ್ಟದಲ್ಲಿ ಗುರುತಿಸಿಕೊಳ್ಳಬಾರದು. ಹೀಗಾಗಿ ನನಗೂ ಇವತ್ತೇ ತಿಳಿಯಿತು ಆ ವಿದ್ಯಾರ್ಥಿ ನೀನೇ ಎಂದು.

ಎದುರಿಗೆ ನಿಂತ ವಿದ್ಯಾರ್ಥಿಯ ಕಣ್ಣಾಲೆಗಳು ತುಂಬಿ ಹರಿಯತೊಡಗಿತ್ತು. ಮತ್ತೊಮ್ಮೆ ಗುರುಗಳ ಪಾದಕ್ಕೆ ಹಣೆ ಮುಟ್ಟಿ ನಮಸ್ಕರಿಸಿ ಈ ನಿಮ್ಮ ಕ್ಷಮಾ ಗುಣದಿಂದ ನಾನು ಮತ್ತೆ ಮನುಷ್ಯನಾಗಿರುವೆ ಎಂದ.

ಇಂದಿನ ಯುಗದಲ್ಲಿ ಪ್ರತಿ ವ್ಯಕ್ತಿಯೂ ಇನ್ನೊಬ್ಬರ ತಪ್ಪುಗಳನ್ನು ಹುಡುಕಿ ಎತ್ತಿತೋರಿಸುವ ಕಾರ್ಯದಲ್ಲಿಯೇ ಮಗ್ನನಾಗಿರುತ್ತಾನೆ.

ಗಣೇಶ ಎಚ್.

ಗ್ರಂಥಪಾಲಕರು

ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜ್, ಶಿವಮೊಗ್ಗ


Comments

  1. Buetiful article by buetiful person Ganesh...Thank you...

    ReplyDelete

Post a Comment

Popular posts from this blog

ನೀನು…

World Book and Copyright Day - 23rd April-2021

Nature Deficit Disorder; Time to know the value of nature